Saturday, October 19, 2019

ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಪಂಪ್ ಡೀಲರ್ಸ್ ಅಸೋಸಿಯೇಷನ್ ವತಿಯಿಂದ 36 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.

ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಪಂಪ್ ಡೀಲರ್ಸ್ ಅಸೋಸಿಯೇಷನ್   ವತಿಯಿಂದ 36 ಲಕ್ಷ ರೂ.ಗಳ ಚೆಕ್ ನ್ನು  ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ನಿನ ಮಾರ್ಕೆಟಿಂಗ್ ವಿಭಾಗದ ಅಧಿಕಾರಿಗಳಾದ ಡಿ.ಎಲ್. ಪ್ರಮೋದ್ ಹಾಗೂ ಎನ್.ಡಿ. ಮಾಥುರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
≠=============================
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ತಮ್ಮ ನಿವಾಸ ಧವಳಗಿರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದರು.

==============================
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ.ಗಳ ಚೆಕ್ಕನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ  ಹಸ್ತಾಂತರಿಸಲಾಯಿತು. 

ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಕೆ. ಗುಪ್ತಾ ಹಾಗೂ ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕ ಅಭಿಜಿತ್ ಮಜುಂದಾರ್ ಹಾಗೂ ಜನರಲ್ ಮ್ಯಾನೇಜರ್ ವಿನ್ಸೆಂಟ್ ಎಂ.ಡಿ. ಉಪಸ್ಥಿತರಿದ್ದರು.

==============================
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಜೆ.ಎಸ್.ಡಬ್ಯೂ. ಸ್ಟೀಲ್ ಸಂಸ್ಥೆಯ ವತಿಯಿಂದ ಇಂದು 2 ಕೋಟಿ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು.

ಸಂಸ್ಥೆಯ ಉಪ ವ್ಯವಸ್ಥಾಪಕ ನಿರ್ದೇಶಕ ಡಾ:ವಿನೋದ್ ನವಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
==≠===========================
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕ ಮಂಡಳಿ ಸಭೆ ಜರುಗಿತು. 
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ತುಷಾರ್ ಗಿರಿನಾಥ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ  ಡಾ: ಇ.ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.
==============================
ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿರುವುದಕ್ಕಾಗಿ, ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಅರ್ಪಿಸಿದರು.
≠=============================

No comments:

Post a Comment