Tuesday, October 22, 2019

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಎಸ್.ವಿ. ರಂಗನಾಥ್ ಹಾಗೂ ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ವಿಶ್ವವಿದ್ಯಾಲಯದ ಸಿಇಒ ಎಂ.ಬಿ. ದ್ಯಾಬೇರಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.
 
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ: ಸಿ.ಎನ್. ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬ್ಯಾಂಕ್ ಆಫ್ ಬರೋಡಾ ವತಿಯಿಂದ ಆಯೋಜಿಸಿದ್ದ 
ಬೆಂಗಳೂರು ಗ್ರಾಮಾಂತರ ವಲಯದ "ಮೆಗಾ ಕಿಸಾನ್ ಮೇಳ"ವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ  ಬ್ಯಾಂಕ್ ಆಫ್ ಬರೋಡಾ ಜನರಲ್ ಮ್ಯಾನೇಜರ್ ಎಸ್.ಎ. ಸುದರ್ಶನ್ ಅವರು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಾ: ಸಿ.ಎನ್.ಅಶ್ವಥ್ ನಾರಾಯಣ್,ಶಾಸಕ ಅರವಿಂದ ಲಿಂಬಾವಳಿ,  ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು 2018 ನೇ ಸಾಲಿನ ವಿಜ್ಞಾನ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಉಪ ಮುಖ್ಯಮಂತ್ರಿ ಡಾ: ಸಿ.ಎನ್. ಅಶ್ವತ್ಥನಾರಾಯಣ್, ಭಾರತ ರತ್ನ ಪ್ರೊ.ಸಿ.ಎನ್.ಆರ್. ರಾವ್, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಕಾರ್ಯದರ್ಶಿ ಪ್ರೊ. ಅಶೋಕ್.ಎಂ. ರಾಯಚೂರ್, ಐ.ಟಿ, ಬಿ.ಟಿ. ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣರೆಡ್ಡಿ ಉಪಸ್ಥಿತರಿದ್ದರು.

No comments:

Post a Comment