Saturday, December 21, 2019

ಬಳಿಕ ಮುಖ್ಯಮಂತ್ರಿಗಳು, ವಿವಿಧ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅಹವಾಲು ಆಲಿಸಿದರು.

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಗೋಲೀಬಾರ್ ನಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರನ್ನು ಶನಿವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಳಿಕ ಮುಖ್ಯಮಂತ್ರಿಗಳು, ವಿವಿಧ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅಹವಾಲು ಆಲಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರೂ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲು,  ಶಾಸಕರಾದ ಯು ಟಿ ಖಾದರ್, ವೇದವ್ಯಾಸ ಕಾಮತ್, ಬಿ ಎಂ ಫಾರೂಕ್, ಐವನ್ ಡಿಸೋಜಾ , ರಾಜೇಶ್ ನಾಯಕ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ ಆರ್ ಲೋಬೋ, ಸೆಂಟ್ರಲ್ ಮುಸ್ಲಿಂ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಉಪಸ್ಥಿತರಿದ್ದರು.

Friday, December 20, 2019

"పోలవరం ప్రాజెక్టుకు 'ప్రధానమంత్రి పోలవరం' అని నామకరణం చెయ్యాలి" - రాజ్యసభలో ఎంపీ జీవీఎల్ నరసింహారావు.


"పోలవరం ప్రాజెక్టుకు 'ప్రధానమంత్రి పోలవరం' అని నామకరణం చెయ్యాలి"
 - రాజ్యసభలో ఎంపీ జీవీఎల్ నరసింహారావు.

రాజ్యసభలో ఎంపీ జీవీఎల్ నరసింహారావు గారు మాట్లాడుతూ
ఆంధ్రప్రదేశ్ జీవనాడి వంటి పోలవరం ప్రాజెక్ట్ ఏపీ రీ-ఆర్గనైజేషన్ యాక్ట్-2019 
విభజన హామిలో భాగంగా 100% నిధులతో కేంద్రం నిర్మిస్తోందని గుర్తుచేశారు.

రాష్ట్ర ప్రభుత్వ నిర్లక్ష్య వైఖరి వల్ల పోలవరం ఆలస్యం అవుతోందని,కేంద్రం పూర్తి స్థాయిలో సహకరిస్తున్నా కేంద్రానికి ఖ్యాతి దక్కడం లేదని అన్నారు."పోలవరం ప్రాజెక్టుకు 'ప్రధానమంత్రి పోలవరం' అని నామకరణం చెయ్యాలని విజ్ఞప్తి చేశారు.

పోలవరం ప్రాజెక్టు లెక్కలను కేంద్రానికి చెప్పడంలో విఫలమైందని అందువలన నిధుల విడుదల ఆలస్యం అవుతోందని తెలిపారు.ఇప్పటివరకు కేంద్రం 6,764 కోట్ల రూపాయలను అందజేశారు.త్వరలో రూ. 1,850 కోట్లు విడుదల చేయడానికి సిద్ధంగా ఉందని తెలిపారు.

Friday, December 13, 2019

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಯಿತು.

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಯಿತು.

ಸಭೆಯಲ್ಲಿ ಮುಖ್ಯಮಂತ್ರಿಗಳು ಕೊಟ್ಟ ನಿರ್ದೇಶನಗಳು ಇಂತಿವೆ.

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ರೂ. ಬಿಡುಗಡೆಯಾಗಿದ್ದರೂ, ಅನೇಕ ಸಂತ್ರಸ್ತರು ಮನೆ ನಿರ್ಮಿಸಲು ಮುಂದಾಗಿಲ್ಲ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ನಿರ್ದೇಶನ. ಭೂ ಕುಸಿತ ಹಾಗೂ ಇನ್ನಿತರ ಕಾರಣಗಳಿಂದ ಮನೆ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ ಪರ್ಯಾಯ ಜಾಗ ಒದಗಿಸಲು ಸೂಚನೆ.

ಈವರೆಗೆ 5.06 ಲಕ್ಷ ರೈತರಿಗೆ 785.94 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ. ಸುಮಾರು 37 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗದಿರುವುದರಿಂದ ಪರಿಹಾರ ಪಾವತಿಗೆ ಅಡಚಣೆಯಾಗಿದೆ. ಈ ಬಗ್ಗೆ ಪರ್ಯಾಯ ವಿಧಾನಗಳನ್ನು ಅನುಸರಿಸಿ ವಾರದೊಳಗೆ ಪರಿಹಾರ ಪಾವತಿಸಲು ಸೂಚನೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಖಾತೆಗಳಿಗೆ ಜಮೆಯಾದ ಇನ್‍ಪುಟ್ ಸಬ್ಸಿಡಿ ಮತ್ತು ಬೆಳೆ ವಿಮೆ ಪರಿಹಾರಗಳನ್ನು ಸಾಲದ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ತಿಳಿಸಲು ಮತ್ತೊಮ್ಮೆ ಲಿಖಿತ ಸೂಚನೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ.

ಕಾರ್ಯದರ್ಶಿಗಳು ನಿಯಮಿತವಾಗಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವರದಿಗಳನ್ನು ಆಯಾ ಸಚಿವರಿಗೆ ಸಲ್ಲಿಸಬೇಕು. ಇದರಲ್ಲಿ ಸಮಸ್ಯೆಗಳಿದ್ದರೆ ಬಗೆಹರಿಸಬೇಕು. ಕಾರ್ಯದರ್ಶಿಗಳು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಬೇಕು. ಅಧಿಕಾರಿಗಳ ಸಭೆ ನಡೆಸುವುದರ ಜತೆಗೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಖುದ್ದು ಪರಿಶೀಲಿಸಲು ಸೂಚನೆ ನೀಡಲಾಯಿತು.

ಸಕಾಲ ಯೋಜನೆಯಡಿ ಕಡತ ವಿಲೇವಾರಿ ತ್ವರಿತವಾಗಿ ಆಗಬೇಕು. ಜತೆಗೆ ಇತರ ಕಡತಗಳನ್ನೂ ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಬಾಕಿ ಉಳಿಸದಂತೆ ನಿರ್ದೇಶನ. 

ಎಲ್ಲ ಇಲಾಖೆಗಳಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಈ ಬಗ್ಗೆ ಅರಣ್ಯ ಮತ್ತು ಕಂದಾಯ ಇಲಾಖೆಗಳೊಂದಿಗೆ ಸಭೆ ನಡೆಸಿ ತೊಡಕುಗಳನ್ನು ನಿವಾರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ.

ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಲ್ಲಿ ಬಹುತೇಕ ಯೋಜನೆಗಳು ವಿಫಲವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ ಗತಿ ಕುರಿತು ಅಧ್ಯಯನ ವರದಿ ಹಾಗೂ ಸಲಹೆ ಪಡೆದು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ.

ವಸತಿ ಯೋಜನೆಗಳನ್ನು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಈ ವರ್ಷಾಂತ್ಯಕ್ಕೆ 1.5 ಲಕ್ಷ ಮನೆಗಳು ನಿರ್ಮಾಣವಾಗಬೇಕಿದ್ದು, ಈವರೆಗೆ 1.09 ಲಕ್ಷ ಮನೆಗಳ ನಿರ್ಮಾಣವಾಗಿದೆ. ಪ್ರಗತಿಯಲ್ಲಿರುವ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಲಾಯಿತು.

ಎಸ್‍ಸಿಪಿ ಟಿಎಸ್‍ಪಿ ಯೋಜನೆಯಡಿ 30,444 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈವರೆಗೆ 11,642 ಕೋಟಿ ರೂ.. ಬಿಡುಗಡೆಯಾಗಿದ್ದು, 9,667 ಕೋಟಿ ರೂ. ವೆಚ್ಚವಾಗಿದೆ. ಮಾರ್ಚ್ 15 ರೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಅನುದಾನ ವೆಚ್ಚ ಮಾಡುವಂತೆ ತಿಳಿಸಲಾಯಿತು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ವೆಚ್ಚ ಮತ್ತು ವಿದ್ಯಾರ್ಥಿ ವೇತನಗಳಿಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದರು.

ಕಾರ್ಮಿಕರ ಪಿಂಚಣಿ ಯೋಜನೆಯಡಿ ಕೇಂದ್ರ ಸರ್ಕಾರವು 7 ಲಕ್ಷ ಗುರಿ ನೀಡಿತ್ತು. ರಾಜ್ಯದ 8 ಲಕ್ಷ ಕಾರ್ಮಿಕರಿಗೆ ಪಿಂಚಣಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹೆಚ್ಚಿನ ನೆರವಿನ ಬಗ್ಗೆ ಚರ್ಚಿಸಲಾಯಿತು.

ಬೆಂಗಳೂರಿನಲ್ಲಿ‌ ಸಂಜೆ ಮತ್ತು ರಾತ್ರಿ ಓಡಾಡುವ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಪೊಲೀಸ್ ಗಸ್ತು ಹೆಚ್ಚಿಸುವುದರ ಜತೆಗೆ ರಾತ್ರಿ ವೇಳೆ ಮಹಿಳಾ ಪೊಲೀಸರು ಸಹ ಗಸ್ತು ತಿರುಗುವ ವ್ಯವಸ್ಥೆ ಮಾಡಲು ಸೂಚಿಸಲಾಯಿತು.

ಬೆಂಗಳೂರಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ‌ ಗಮನ ಹರಿಸಲು, ಬೆಂಗಳೂರು ಕೆರೆಗಳ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳಲು, ಬೆಂಗಳೂರನ್ನು ಕಸ ಮುಕ್ತ ನಗರವನ್ನಾಗಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ.

Saturday, December 7, 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಟಿ.ಎಂ.ಇ.ಐ.ಸಿ ಇಂಡಸ್ಟ್ರಿಯಲ್ ಸಿಸ್ಟಮ್ಸ್ ವತಿಯಿಂದ ಮುಖ್ಯಮಂತ್ರಿಗಳ ಪ್ರವಾಹ ಪರಿಹಾರ ನಿಧಿಗೆ ನೀಡಲಾದ 19 ಲಕ್ಷ ರೂಪಾಯಿ ದೇಣಿಗೆಯನ್ನು ಸ್ವೀಕರಿಸಿದರು.
ಸಂಸ್ಥೆಯ ಕೈಗಾರಿಕಾ ಸಂಪರ್ಕ ವಿಭಾಗದ ಮುಖ್ಯಸ್ಥ ಹೆಚ್.ಎಸ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೇಂದ್ರದಿಂದ ಅನುಮೋದನೆಗೆ ಬಾಕಿ ಇರುವ ಹೆದ್ದಾರಿ ಕೆಲಸಗಳ ಬಗ್ಗೆ ಹಾಗೂ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಡಿಸೆಂಬರ್ 10 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೇವಾಡಿಗ ನವೋದಯ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ, 'ವಿದ್ಯಾನಿಧಿ ಮತ್ತು ದೇವಾಡಿಗ ಗ್ಲೋಬಲ್ ಎಜುಕೇಶನ್ ಫೌಂಡೇಶನ್' ಅನ್ನು ಉದ್ಘಾಟಿಸಿದರು. 
ವಸತಿ ಸಚಿವ ವಿ. ಸೋಮಣ್ಣ, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ, ಜಯಪ್ರಕಾಶ್ ಹೆಗಡೆ, ದೇವಾಡಿಗ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ಆಯೋಜಿಸಿದ್ದ ಕನ್ನಡ ಹಬ್ಬ  ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಚಲನಚಿತ್ರ ನಟ ಧನಂಜಯ, ವಿಜಯ ಕರ್ನಾಟಕ ಸಿ.ಇ.ಒ ರಂಜಿತ್ ಕಾಟೆ  ಉಪಸ್ಥಿತರಿದ್ದರು.